ಶಿವಮೊಗ್ಗ : ನಗರದ ಕಾರ್ ಶೋರೂಮ್ ಒಂದರಲ್ಲಿ ಶುಕ್ರವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ನಗರದ ಶಂಕರಮಠ ರಸ್ತೆಯಲ್ಲಿರುವ ಶೋರೂಮ್ ಹೊತ್ತಿ ಉರಿಯುತ್ತಿದ್ದು, ಹಲವು ಕಾರುಗಳು ಬೆಂಕಿ ಯಲ್ಲಿ ಸುಟ್ಟು ಕರಗಲಾಗಿದ್ದು ಕೋಟ್ಯಂತರ ರೂ. ನಷ್ಟ ಅಂದಾಜಿಸಲಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದು, ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.