ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾದ ಪರಿಣಾಮ ಶಾಲಾ ಬಸ್ಸಿನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ.
ಇಲ್ಲಿನ ಸ್ಪೋರ್ತಿ ಇಂಟರ್ನ್ಯಾಷನಲ್ ಶಾಲೆಯ ಮಕ್ಕಳನ್ನು ಕರೆದೊಯ್ಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.ಘಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದು ಅವರನ್ನು ದುರ್ಗಾ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ,ಘಟನಾ ಸ್ಥಳಕ್ಕೆ ಭದ್ರಾವತಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.