ಬೆಂಗಳೂರು: ಉಚ್ಚಾಟನೆ ಕುರಿತು ಟ್ವೀಟ್ ಮೂಲಕ ಶಾಸಕ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದು, ‘ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ || ಉಪಕಾರ ಮಾಡಿದರೆ ಅಪಕರಿಸುವ ಕಾಲ.. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ.. ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ..
ಸತ್ಯವಂತರಿಗಿದು ಕಾಲವಲ್ಲ ಎಂಬ ಪುರಂದರ ದಾಸರ ಸಾಲುಗಳನ್ನು ಬರೆದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ‘ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ. ‘ತಪ್ಪನ್ನು .. ತಪ್ಪು ಎಂದು ತೋರಿಸಿದ್ದಕ್ಕೆ ‘ ನನಗೆ ಸಿಕ್ಕ ಪ್ರತಿಫಲವಿದು’ ಎಂದು ಹೇಳಿದ್ದಾರೆ.
