ಮುಂಬೈ : ಪುರಬ್ ಔರ್ ಪಶ್ಚಿಮ್ ಮತ್ತು ಕ್ರಾಂತಿಯಂತಹ ದೇಶಭಕ್ತಿಯ ಚಲನಚಿತ್ರಗಳಿಗೆ ಹೆಸರುವಾಸಿಯಾಗಿದ್ದ ನಟ, ನಿರ್ದೇಶಕ ಮನೋಜ್ ಕುಮಾರ್ ಅವರು ಇಂದು ನಿಧನಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅದರಂತೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ 3:30 ಕ್ಕೆ ನಿಧನಹೊಂದಿರುವುದಾಗಿ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
ಪ್ರಶಸ್ತಿಗಳು ಮತ್ತು ಗೌರವಗಳು
ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಮನೋಜ್ ಕುಮಾರ್ ಅವರಿಗೆ 1992 ರಲ್ಲಿ ಪದ್ಮಶ್ರೀ ಮತ್ತು 2015 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಯಿತು.
ಸಂತಾಪ:
ಮನೋಜ್ ಕುಮಾರ್ ಅವರ ನಿಧನಕ್ಕೆ ಬಾಲಿವುಡ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
