Trending

ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವೃದ್ಧೆಯರು ಸಾವು, ಓರ್ವರಿಗೆ ಗಾಯ

Spread the love

ಹುಬ್ಬಳ್ಳಿ:  ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್​ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೇ, ಓರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಸುಜಾತಾ ಹಿರೇಮಠ (60), ಗಾಯತ್ರಿ ಮಾಂತನಮಠ (67), ಶಕುಂತಲಾ ಹಿರೇಮಠ (72) ಸಂಪತ್​ ಕುಮಾರಿ (63) ಮೃತ ದುರ್ದೈವಿಗಳು. ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಕಾರು ಚಾಲಕ ವಿರೇಶ್​ ಹಿರೇಮಠ (65) ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐವರು ಕಾರ್ಯಕ್ರಮವೊಂದಕ್ಕೆ ಕೆಎ 25 ಎಮ್​ಡಿ 1151 ನಂಬರ್​ನ ಕಾರಿನಲ್ಲಿ ಹಾವೇರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಹಾವೇರಿಯಿಂದ ಹುಬ್ಬಳ್ಳಿಯತ್ತ ಎನ್​ಹೆಚ್​ 4 ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದರು. ಹುಬ್ಬಳ್ಳಿಯಿಂದ ಕೇವಲ 12 ಕಿಮೀ ದೂರದಲ್ಲಿರುವ ನೂಲ್ವಿ ಕ್ರಾಸ್​ನಲ್ಲಿ ಕಾರು, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಿವೈಡರ್​​ಗೆ ಡಿಕ್ಕಿಯಾಗಿದೆ. ಅವಘಡದಲ್ಲಿ ಕಾರಿನಲ್ಲಿದ್ದ ಮೂವರು ವೃದ್ಧ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

[pj-news-ticker]