Trending

ನಾಳೆ ದ್ವಿತೀಯ ಪಿಯು ಫಲಿತಾಂಶ : ಎಷ್ಟು ಗಂಟೆಗೆ? ನೋಡುವುದ್ಹೇಗೆ? ಇಲ್ಲಿದೆ ವಿವರ

Spread the love

ಬೆಂಗಳೂರು : ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ  ಗುಡ್​ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಅಂದೆ ಮಧ್ಯಾಹ್ನ 1.30ಕ್ಕೆ ವೆಬ್​ಸೈಟ್​ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇದ್ದಲ್ಲೇ ಆನ್​​ಲೈನ್​​ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.

ಇನ್ನು ವೀಕ್ಷಣೆ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ರಿಸಲ್ಟ್ ನೋಡುವುದು ಎಲ್ಲಿ?

ಪತ್ರಿಕಾಗೋಷ್ಠಿ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ನಂತರ ಅಂದರೆ 1:30ರ ನಂತರ ಆನ್​ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.

ಆನ್​ಲೈನ್​ನಲ್ಲಿ ಫಲಿತಾಂಶ ನೋಡುವುದ್ಹೇಗೆ?

  1. ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
  2. ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
  3. ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
  4. Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
  5. ನಂತರ ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.
[pj-news-ticker]