Trending

ಶಿವಮೊಗ್ಗದಲ್ಲಿ ‘CET’ ಬರೆಯಲು ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪ : ಕಠಿಣ ಕ್ರಮಕ್ಕೆ ಸೂಚಿಸಿದ ಮಧು ಬಂಗಾರಪ್ಪ

Spread the love

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿನ್ನೆ ಸಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಜನಿವಾರವನ್ನು ತೆಗೆಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿ, ಯಾರು ಈ ರೀತಿ ನಡೆದುಕೊಂಡಿದ್ದಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಈ ರೀತಿ ನಿರ್ದೇಶನ ಕೊಡುವ ಅಧಿಕಾರ ಯಾರಿಗೂ ಇಲ್ಲ. ಅಲ್ಲದೆ ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಹಾಗಾಗಿ ಸಂಬಂಧಪಟ್ಟ ಇಲಾಖೆ ಜೊತೆಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುತ್ತದೆ. ನನ್ನ ಇಲಾಖೆ ಇಲ್ಲ ಅಂದರು ಕೂಡ ಸಂಬಂಧಪಟ್ಟ ಇಲಾಖೆಗೆ ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಆಗುವುದರಿಂದ ಕಠಿಣವಾದ ಕ್ರಮ ತೆಗೆದುಕೊಳ್ಳುವ ಸೂಚನೆ ನೀಡಿದ್ದೇನೆ.

ಈ ರೀತಿ ಮಾಡೋದು ಸರಿಯಲ್ಲ. ಇಂತಹ ವಿಷಯಗಳು ಬಹಳ ಸೂಕ್ಷ್ಮವಾದ ವಿಚಾರಗಳು ಇರುತ್ತವೆ. ಯಾವುದೇ ಜಾತಿ ಧರ್ಮಕ್ಕೆ ಆಗಲಿ ಗೌರವ ಕೊಡಬೇಕು. ನಮ್ಮ ಸರ್ಕಾರದಲ್ಲಿ ಈ ರೀತಿ ಆಗುತ್ತೆ ಎಂದರೆ ಕಠಿಣವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಯಾಕೆ ಈ ರೀತಿ ಆಗಿದೆ ಹಾಗೂ ಯಾರು ಈ ರೀತಿ ಮಾಡಿದವರು ಎನ್ನುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

 

[pj-news-ticker]