ಶಿವಮೊಗ್ಗ: ತೀರ್ಥಹಳ್ಳಿಯ ಕುಂದಾದ್ರಿ ಬೆಟ್ಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಕುಂದಾದ್ರಿ ಬೆಟ್ಟಕ್ಕೆ ಹೋಗುವಾಗ ಸಿಗುವ ಪಾರ್ಕಿಂಗ್ ಸ್ಥಳದಿಂದ ಮುಂದೆ ಇರುವ ಕಾಡಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಈ ಶವವನ್ಜು ಸುಟ್ಟು ಹಾಕಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಕುಂದಾದ್ರಿ ಬೆಟ್ಟದಲ್ಲಿ ಟ್ರಕ್ಕಿಂಗ್ಗೆ ಬಂದಿದ್ದವರಿಗೆ ಅಪರಿಚಿತ ವ್ಯಕ್ತಿಯ ಶವ ಸುಟ್ಟಿರುವುದು ಕಂಡು ಬಂದಿದೆ. ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ತೀರ್ಥಹಳ್ಳಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಆಗುಂಬೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
