Trending

ಪಹಲ್ಗಾಮ್‌ ದಾಳಿ : ಪತ್ನಿ ಎದುರೇ ಪತಿಯನ್ನು ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

Spread the love

ಪಹಲ್ಗಾಮ್‌ : ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ  ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಪತ್ನಿಯ ಕಣ್ಣೆದುರೇ ಮಂಜುನಾಥ್ ಅವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಮೃತ ಮಂಜುನಾಥ್ ಅವರ ಪತ್ನಿ ಪಲ್ಲವಿ ಮತ್ತು ಅವರ ಪುತ್ರ ಸುರಕ್ಷಿತವಾಗಿದ್ದಾರೆ. ಪಹಲ್ಗಾಮ್‌ ಪ್ರವಾಸಿ ತಾಣದಲ್ಲಿ ನಡೆದ ಉಗ್ರರ ಅಟ್ಟಾಹಸದ ಬಗ್ಗೆ ಪಲ್ಲವಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ಏಪ್ರಿಲ್ 19ರಂದು ಪ್ರವಾಸಕ್ಕೆ ಬಂದಿದ್ವಿ. ನನ್ನ ಕಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನ್ನ ಗಂಡನನ್ನ ಸಾಯಿಸಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನ, ನನ್ನ ಮಗನನ್ನೂ ಕೊಂದು ಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಅಂದ್ರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು ಎಂದು ಅಲ್ಲಿ ನಡೆದ ಭೀಕರ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.

[pj-news-ticker]