Trending

ಕನ್ನಡಿಗರನ್ನು ಕೆಣಕಲು ಹೋಗಿ ಸರಿಯಾದ ಹೊಡೆತ ತಿಂದ ಸೋನು ನಿಗಮ್‌ : ಸ್ಯಾಂಡಲ್‌ವುಡ್‌ನಿಂದ ಬ್ಯಾನ್

Spread the love

ಬೆಂಗಳೂರು: ಕನ್ನಡಿಗರನ್ನು ಪಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲಾಗಿದೆ. ಸೋನು ನಿಗಮ್‌ ಅವರ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೋಮವಾರ

ಸಭೆ ನಡೆಸಿತು. ಈ ಸಭೆಯಲ್ಲಿ ಸೋನು ನಿಗಮ್‌ ಅವರನ್ನು ಸ್ಯಾಂಡಲ್‌ವುಡ್‌ನಿಂದ ನಿಷೇಧಿಸಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಕೆಎಫ್‌ಸಿಸಿ ಅಧ್ಯಕ್ಷ ನರಸಿಂಹಲು, ವಾಣಿಜ್ಯ ಮಂಡಳಿಯ ಕುಮಾರ್, ಸಂಗೀತ ನಿರ್ದೇಶಕ ಧರ್ಮವಿಶ್, ನಿರ್ದೇಶಕರ ಸಂಘದ ಅಧ್ಯಕ್ಷ ವಿಶ್ವನಾಥ್, ಗಾಯಕಿ ಶಮಿತಾ ಮಲ್ನಾಡ್ ಮತ್ತಿತರರು ಭಾಗವಹಿಸಿದರು.

ಕೆಎಫ್‌ಸಿಸಿ ಅಧ್ಯಕ್ಷ ನರಸಿಂಹಲು ಹೇಳಿದ್ದೇನು?

ಸಭೆಯ ಬಳಿಕ ಮಾತನಾಡಿದ ಕೆಎಫ್‌ಸಿಸಿ ಅಧ್ಯಕ್ಷ ನರಸಿಂಹಲು, ʼʼಪಹಲ್ಗಾಮ್ ಗಲಭೆ ಕುರಿತು ಸೋನು ನಿಗಮ್ ಖಾಸಗಿ ಶಾಲೆಯಲ್ಲಿ‌ ಮಾತನಾಡಿದ್ದಾರೆ. ಪಹಲ್ಗಾಮ್ ವಿಚಾರವನ್ನು ಕನ್ನಡಿಗರಿಗೆ ಹೋಲಿಕೆ ಮಾಡಿದ್ದಾರೆ. ಇದು ಸರಿಯಲ್ಲ. ಮತ್ತೆ ಲೈವ್ ಬಂದು ಅವರ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಹೀಗಾಗಿ ಅವರನ್ನು ನಿಷೇಧಿಸಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ವಿರುದ್ದ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ. ಯಾರು ಕೂಡ ಅವರನ್ನು ಕಾರ್ಯಕ್ರಮಕ್ಕೆ, ಸಿನಿಮಾಕ್ಕೆ ಹಾಡಿಸಲು ಕರೆಯಬಾರದುʼʼ ಎಂದು ಕರೆ ನೀಡಿದರು.

ʼʼಸೋನು ನಿಗಮ್‌ ಅವರಿಂದ ಯಾರಾದರೂ ಹಾಡಿಸಿದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಯಾವ ರೀತಿ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ಆಮೇಲೆ ತೀರ್ಮಾನಿಸುತ್ತೇವೆ. ಸದ್ಯಕ್ಕೆ ಅಸಹಕಾರ ಅಂತ ತೀರ್ಮಾನ ಮಾಡಿದ್ದೇವೆ. ಅವರನ್ನು ಎಷ್ಟು ದಿನ ಬ್ಯಾನ್ ಮಾಡಬೇಕು? ಯಾವ ರೀತಿ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎನ್ನುವುದನ್ನು ತೀರ್ಮಾನಿಸುತ್ತೇವೆʼʼ ಎಂದು ವಿವರಿಸಿದರು.

[pj-news-ticker]