Trending

ಹೊಳೆಹೊನ್ನೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಹತ್ಯೆ : ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಕೊಲೆ

Spread the love

ಹೊಳೆಹೊನ್ನೂರು : ಇಂದು ಬೆಳಂ ಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವಾಕಿಂಗ್ ಗೆ ಎಂದು ತೆರಳಿದ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಹೊಳೆ ಹೊನ್ನೂರಿನಲ್ಲಿ ನಡೆದಿದೆ.

ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಕೊಲೆಯಾಗಿದೆ. ಹೇಮಣ್ಣ (68) ಎನ್ನುವವರು ಭೀಕರವಾಗಿ ಕೊಲೆಯಾದವರು ಎಂದು ತಿಳಿದುಬಂದಿದೆ.

ಹೇಮಣ್ಣ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

 

[pj-news-ticker]