Trending

ಜೈಲಿಂದ ಬಿಡುಗಡೆಯಾಗಿ ರೋಡ್‌ ಶೋ : ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಅರೆಸ್ಟ್‌

Spread the love

ಹಾವೇರಿ: ಜೈಲಿನಿಂದ ಬಿಡುಗಡೆಯಾದ ಬಳಿಕ ರೋಡ್ ಶೋ ನಡೆಸಿದ ಹಿನ್ನೆಲೆಯಲ್ಲಿ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಆರೋಪಿಗಳು ರೋಡ್‌ ಶೋ ನಡೆಸಿ ಸಂಭ್ರಮಾಚರಣೆ ನಡೆಸಿದ್ದಕ್ಕೆ ಜನಾಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ರೋಡ್ ಶೋ ನಡೆಸಿದ್ದ 7 ಆರೋಪಿಗಳ ಪೈಕಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂದಿಸಿ ಪ್ರಮುಖ 7 ಆರೋಪಿಗಳಿಗೆ ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಿಂದ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಆದರೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದರಿಂದ ಐವರನ್ನು ಮತ್ತೆ ಬಂಧಿಸಲಾಗಿದೆ.

ಸಂತ್ರಸ್ತೆ ಆರೋಪಿತರನ್ನು ಗುರುತಿಸಲು ವಿಫಲವಾದ ಹಿನ್ನಲೆ ಎ1 ಅಪ್ತಾಬ್ ಚಂದನಕಟ್ಟಿ, ಎ2- ಮದರ್ ಸಾಬ್ ಮಂಡಕ್ಕಿ, ಎ3- ಸಮಿವುಲ್ಲಾ ಲಾಲನವರ, ಎ7- ಮಹಮದ್ ಸಾದಿಕ್ ಅಗಸಿಮನಿ, ಎ8- ಶೊಯಿಬ್ ಮುಲ್ಲಾ, ಎ11- ತೌಸಿಪ್ ಚೋಟಿ, ಎ13- ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರಾಗಿತ್ತು.

2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 19 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. 19 ಮಂದಿಯಲ್ಲಿ 12 ಜನರಿಗೆ ನ್ಯಾಯಾಲಯ ಈ ಹಿಂದೆ ಜಾಮೀನು ಮಂಜೂರು ಮಾಡಿತ್ತು. ಮೇ 20ರಂದು ಇನ್ನುಳಿದ 7 ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

ಈ 7 ಆರೋಪಿಗಳು, ಜಾಮೀನು ಪಡೆದ ಬಳಿಕ ಕಾರ್ ಮತ್ತು ಬೈಕ್‌ಗಳಲ್ಲಿ ವಿಜಯೋತ್ಸವ ಮೆರವಣಿಗೆ ಮಾಡಿದ್ದರು. 5 ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರ ಜತೆ ಮೆರವಣಿಗೆ ನಡೆದಿತ್ತು. ಅಕ್ಕಿ ಆಲೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿರುವ ವಿಡಿಯೋಗಳು ವೈರಲ್ ಆಗಿದ್ದರಿಂದ ಆರೋಪಿಗಳನ್ನು ಪೊಲೀಸರು, ಸದ್ಯ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

 

[pj-news-ticker]