Trending

ಚಾಲಕ‌ನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ : ಏಣಿ ಹಾಕಿ ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯರು

Spread the love

ದಾವಣಗೆರೆ: ಚಾಲನಕ‌ನ ನಿಯಂತ್ರಣ ತಪ್ಪಿ ಸಾರಿಗೆ ಇಲಾಖೆ ಬಸ್ ಪಲ್ಟಿಯಾಗಿರುವ ಘಟನೆ ದಾವಣಗೆರೆ ತಾಲೂಕಿನ ಹುಲಿಕಟ್ಟೆ ಗ್ರಾಮದ ಬಳಿ ನಡೆದಿದ್ದು, ಭಾರಿ ಅನಾಹುತ ತಪ್ಪಿದೆ. ಬಸ್ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದರು. ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣ- ಪುಟ್ಟ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.‌

ಹುಲಿಕಟ್ಟೆಯಿಂದ ದಾವಣಗೆರೆಗೆ ಬರುತ್ತಿದ್ದ ಬಸ್ ಎದುರಿಗೆ ಕುರಿಹಿಂಡು‌ ಬಂದ ಹಿನ್ನೆಲೆ ಚಾಲಕ ಬಸ್ ರಸ್ತೆ ಪಕ್ಕ ತೆಗೆದುಕೊಳ್ಳಲು ಹೋಗಿ ಪಲ್ಟಿಯಾಗಿರುವುದಾಗಿ ಪ್ರಯಾಣಿಕರು ಹೇಳಿದ್ದಾರೆ. ಅಪಘಾತ ಆಗಿದ್ದನ್ನು ಕಂಡ‌ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಅಲ್ಲದೇ, ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಸ್ ಕಂದಕಕ್ಕೆ ಬಿದ್ದ ಹಿನ್ನೆಲೆ ಅಲ್ಲಿದ್ದ ಸ್ಥಳೀಯರು ಏಣಿ ಹಾಕಿ ಬಸ್ ಮೇಲೆ ಹತ್ತಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು, ಬಹೊದೊಡ್ಡ ಅನಾಹುತ ತಪ್ಪಿದೆ. ಕಂದಕಕ್ಕೆ ಬಿದ್ದ ಬಸ್ ಅನ್ನು ವೀಕ್ಷಿಸಲು ಜನಸಾಗರವೇ ಹರಿದು ಬಂದಿತ್ತು. ಅಲ್ಲದೇ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಅಗತ್ಯ ನೆರವು ನೀಡಿದರು.

[pj-news-ticker]