Breaking
Sat. Oct 12th, 2024

ಘೋರ ದುರಂತ… ಟ್ರ್ಯಾಕ್ಟರ್ ಕೆರೆಗೆ ಬಿದ್ದು 7 ಮಕ್ಕಳು ಸೇರಿ 15 ಮಂದಿ ಮೃತ್ಯು

By Mooka Nayaka News Feb 24, 2024
Spread the love

ಉತ್ತರ ಪ್ರದೇಶ: ಭಕ್ತರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯೊಂದು ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿರುವ ಘೋರ ದುರಂತ ಉತ್ತರ ಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ.

ಮಾಘ ಪೂರ್ಣಿಮೆಯ ಶುಭ ದಿನದಂದು ಪುಣ್ಯಸ್ನಾನಕ್ಕಾಗಿ ಗಂಗಾನದಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಗ್ರಾಮಸ್ಥರು ತೆರಳುತ್ತಿದ್ದರು ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ನ ಹಿಂಬದಿ ಟ್ರಾಲಿ ಕೆರೆಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ. ಈ ವೇಳೆ ಹಲವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಕಾಸ್ಗಂಜ್‌ನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೃತ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ:ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ ಐವತ್ತು ಸಾವಿರ ಪರಿಹಾರ ಘೋಷಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಕಸ್ಗಂಜ್ ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ರಕ್ಷಣಾ ಕಾರ್ಯಾಚರಣೆಗೂ ಬೇಕಾದ ಅಗತ್ಯ ವ್ಯವಸ್ಥೆಯನ್ನು ಮಾಡುವಂತೆ ಸೂಚಿಸಿದ್ದಾರೆ.

Related Post