Breaking
Sat. Apr 20th, 2024

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು; ರಾಜ್ಯದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

By Mooka Nayaka News Feb 26, 2024
Spread the love

ಉತ್ತರ ಕನ್ನಡ: ಮಲೆನಾಡಿಗರನ್ನು ಕಂಗೆಡಿಸಿರುವ ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ಉತ್ತರ ಕನ್ನಡ ಜಿಲ್ಲೆಯ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, ರಾಜ್ಯದಲ್ಲಿ ಈ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಮೃತರನ್ನು ಸಿದ್ದಾಪುರ ತಾಲ್ಲೂಕಿನ ಕೂರ್ಲಕೈ ಗ್ರಾಮದ 60 ವರ್ಷದ ಮಹಿಳೆ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮೂರು ದಿನಗಳಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.

ಅವರಿಗೆ 20 ದಿನಗಳ ಹಿಂದೆ ಮಂಗನ ಜ್ವರ ಕಾಣಿಸಿಕೊಂಡಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದರು. ಸಿದ್ದಾಪುರ ತಾಲ್ಲೂಕಿನಲ್ಲಿಯೇ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.

103 ಸಕ್ರಿಯ ಮಂಗನ ಕಾಯಿಲೆ ಪ್ರಕರಣಗಳನ್ನು ಹೊಂದಿರುವ ರಾಜ್ಯದಲ್ಲಿ ಇದುವರೆಗೆ ಮೂವರು ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ರೋಗದಿಂದ ಮೃತಪಟ್ಟಿದ್ದಾರೆ.

Related Post