Trending

ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ : ಅಪಾಯದಿಂದ ಪಾರು

Spread the love

ಬೆಳಗಾವಿ: ಅಥಣಿ ಶಾಸಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ  ಬೆಳಗಾವಿಯ ದರೂರ್ ಬಳಿ ಸೋಮವಾರ ಸಂಜೆ ನಡೆದಿದೆ.

ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಲಕ್ಷ್ಮಣ್ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ತಿಳಿದುಬಂದಿದೆ. ಲಕ್ಷ್ಮಣ್ ಸವದಿ ಅವರು ಗೋಕಾಕ್‌ನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಾವಿಯ ದರೂರ್ ಬಳಿ ಅವರ ಕಾರಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಅವರ ಕಾರು ಜಖಂಗೊಂಡಿದ್ದು, ಅಲ್ಲಿಂದ ಬೇರೆ ವಾಹನದಲ್ಲಿ ಮಾಜಿ ಡಿಸಿಎಂ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[pj-news-ticker]