Breaking
Sat. Apr 20th, 2024

ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

By Mooka Nayaka News Feb 26, 2024
Spread the love

ಜನಪ್ರಿಯ ಗಾಯಕ ಪಂಕಜ್ ಉದಾಸ್ ಅವರು ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 73 ವರ್ಷದ ಅವರು ಇಂದು ಕೊನೆಯುಸಿರು ಎಳೆದರು.

ಅವರ ನಿಧನದ ಸುದ್ದಿಯನ್ನು ಪುತ್ರಿ ನಯಾಬ್ ಉದಾಸ್ ಖಚಿತಪಡಿಸಿದ್ದಾರೆ. 1980ರ ದಶಕದಲ್ಲಿ ಪಂಕಜ್ ಉಧಾಸ್ ಅವರು ಗಝಲ್ ಗಾಯನದ ಮೂಲಕ ಫೇಮಸ್ ಆಗಿದ್ದರು. ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಾಲಿವುಡ್ನ ಅನೇಕ ಸೂಪರ್ ಹಿಟ್ ಹಾಡುಗಳಿಗೆ ಅವರು ಧ್ವನಿ ನೀಡಿದ್ದರು. ಕಿಚ್ಚ ಸುದೀಪ್ ಅಭಿನಯದ ‘ಸ್ಪರ್ಶ’ ಸಿನಿಮಾದ ಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರನ್ನು ಅವರು ರಂಜಿಸಿದ್ದರು.

ಪಂಕಜ್ ಉದಾಸ್ ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಸ್ಪರ್ಶ’ ಸಿನಿಮಾದಲ್ಲಿನ ‘ಬರೆಯದ ಮೌನದ ಕವಿತೆ ಹಾಡಾಯಿತು..’, ‘ಚಂದಕಿಂತ ಚಂದ ನೀನೇ ಸುಂದರ..’ ಹಾಡುಗಳು ಪಂಕಜ್ ಉದಾಸ್ ಅವರ ಕಂಠದಲ್ಲಿ ಮೂಡಿಬಂದಿದ್ದವು. ಕೇಳುಗರ ಫೇವರಿಟ್ ಲಿಸ್ಟ್ನಲ್ಲಿ ಈ ಹಾಡುಗಳು ಈಗಲೂ ಜಾಗ ಪಡೆದುಕೊಂಡಿವೆ. ಪಂಕಜ್ ಉದಾಸ್ ಅವರ ಅಗಲಿಕೆಗೆ ಕರುನಾಡಿನಲ್ಲಿನ ಅಭಿಮಾನಿಗಳು ಕೂಡ ಕಂಬನಿ ಮಿಡಿಯುತ್ತಿದ್ದಾರೆ.

2006ರಲ್ಲಿ ಪಂಕಜ್ ಉದಾಸ್ ಅವರಿಗೆ ಭಾರತ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಅಲ್ಲದೇ, ಅನೇಕ ಪ್ರತಿಷ್ಠಿತ ಪ್ರಶಸ್ತಿ, ಪುರಸ್ಕಾರಗಳು ಪಂಕಜ್ ಉದಾಸ್ ಅವರನ್ನು ಅರಸಿ ಬಂದಿದ್ದವು. ಭಾರತದ ಮಾತ್ರವಲ್ಲದೇ ವಿದೇಶದ ಹಲವು ವೇದಿಕೆಗಳಲ್ಲಿ ಅವರು ಸಂಗೀತ ಕಾರ್ಯಕ್ರಮ ನೀಡಿದ್ದರು. ಲೆಜೆಂಡರಿ ಗಾಯಕನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

Related Post