Trending

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

Spread the love

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ  ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ನೌಕರರ ವರ್ಗಾವಣೆ ಕೈಗೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರತಿಭಾ. ಕೆ ಅವರು ಆದೇಶ ಹೊರಡಿಸಿದ್ದಾರೆ.

2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿ ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ‌ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಈ ಹಿಂದೆ ಆದೇಶಿಸಲಾಗಿತ್ತು. ಈ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಪರಿಗಣಿಸಿ, ಸರ್ಕಾರವು ಇದೀಗ ಆದೇಶ ಹೊರಡಿಸಿದೆ.

12.05.2025ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

[pj-news-ticker]