Breaking
Sat. Apr 20th, 2024

ಪೂಜ್ಯ ತಂದೆ, ಅವರ ಮಗ ವಿಫಲ: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ 

By Mooka Nayaka News Feb 27, 2024
Spread the love

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಅವರ ಮಗ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಪೂಜ್ಯ ತಂದೆಯವರು ಮತ್ತು ಅವರ ಮಗ ವಿಫಲರಾಗಿದ್ದಾರೆ ಎಂದು ಯತ್ನಾಳ್ ಟೀಕಿಸಿದ್ದಾರೆ.

ಸೋಮಶೇಖರ್ ಆ ರೀತಿ ಮಾಡಬಾರದಿತ್ತು. ನಮ್ಮಲ್ಲಿ ಕೇವಲ ಹೊಂದಾಣಿಕೆ ರಾಜಕೀಯ ಆಗಿ ಹೋಗಿದೆ. ಇದೇ ಕಾರಣಕ್ಕೆ ನಾನು ಪದೇಪದೇ ಹೊಂದಾಣಿಕೆ ರಾಜಕೀಯದ ಬಗ್ಗೆ ಪ್ರಸ್ತಾಪಿಸುತ್ತಿರುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.

ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದು ಮತ್ತೊಬ್ಬ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಕೂಡ ಅಡ್ಡ ಮತದಾನ ಮಾಡುವ ಆತಂಕ ಪಕ್ಷದ ನಾಯಕರಿಗೆ ಎದುರಾಗಿದೆ. ಈ ಮಧ್ಯೆ ಕಲ್ಯಾಣ ರಾಜ್ಯ ಪ್ರಗತಿಪಕ್ಷದ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಯಾರಿಗೆ ಮತ ಹಾಕಿದ್ದು ಎಂಬ ವಿಚಾರ ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

Related Post