Trending

ಯುಪಿಎಸ್‌ ಸ್ಫೋಟಗೊಂಡು ಇಬ್ಬರು ಸಾವು

Spread the love

ದಾವಣಗೆರೆ: ದಾವಣಗೆರೆಯ  ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು  ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ  ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವಿಮಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ.

ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

[pj-news-ticker]