ಶಿವಮೊಗ್ಗ: ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಸಹೋದರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ 29ರ ರಾತ್ರಿ ಕುಂಸಿಯ ಕುಂಭೇಶ್ವರ ಬೀದಿಯಲ್ಲಿ ವಾಸು ಎಂಬಾತನ ಹತ್ಯೆ ನಡೆದಿತ್ತು. ಬೈಕ್ನಲ್ಲಿ ಹೋಗುತ್ತಿದ್ದ ವಾಸುವಿನ ಮೇಲೆ ಆರೋಪಿಗಳು ಮಚ್ಚಿನಿಂದ ದಾಳಿ ನಡೆಸಿ, ಹಲ್ಲೆ ನಡೆಸಿದ್ದರು. ಗಂಭೀರ ಗಾಯದಿಂದ ರಕ್ತಸ್ರಾವವಾಗಿ ವಾಸು ಸ್ಥಳದಲ್ಲಿಯೇ ಸಾವನ್ನಪ್ಪಿದ್ದನು.
ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಕುಂಸಿ ಪೊಲೀಸ್ ಠಾಣೆಯ ಪಿಐ ದೀಪಕ್ ಅವರು ತನಿಖೆ ಪ್ರಾರಂಭಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕುಂಸಿ ಗ್ರಾಮದ ಹರೀಶ್(23) ಹಾಗೂ ಆಕಾಶ್(21) ಆರೋಪಿಗಳಾಗಿದ್ದು, ವಿಚಾರಣೆ ವೇಳೆ ಕೊಲೆಯನ್ನು ತಾವೇ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.
