Trending

ನೀರಿನ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಕೊಂದ ನಿಷ್ಕರುಣಿ ತಾಯಿ

Spread the love

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ  45 ದಿನದ ಮಗುವನ್ನು ನಿಷ್ಕರುಣಿ ತಾಯಿಯೊಬ್ಬಳು ಭೀಕರವಾಗಿ ಕೊಲೆ ಮಾಡಿದ್ದಾಳೆ. ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಹತ್ಯೆಗೈದಿದ್ದಾಳೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವಿಶೇಷಪುರದ ನಾಗಕಲ್ಲು ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪವನ್ ಹಾಗೂ ರಾಧೆ ಎಂಬ ದಂಪತಿಗೆ ಈ ಗಂಡು ಮಗು ಜನಿಸಿತ್ತು. ಗಂಡ ಮನೆ ನಿಭಾಯಿಸದೆ ಕುಡಿತದ ಚಟಕ್ಕೆ ಒಳಗಾಗಿದ್ದ. ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆಯಲ್ಲಿ ಹತಾಶಗೊಂಡ ತಾಯಿ ತಡರಾತ್ರಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ.

ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ರಾಧಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

[pj-news-ticker]