Breaking
Sat. Apr 20th, 2024

ಮೀನುಗಾರಿಕೆಗೆ ತೆರಳಿದ್ದ ವೇಳೆ ಬಲೆಯೊಳಗೆ ಸಿಲುಕಿ ಮೀನುಗಾರ ಸಾವು

By Mooka Nayaka News Mar 1, 2024
Spread the love

ಉಡುಪಿ : ಮೀನುಗಾರಿಕೆಗೆ ತೆರಳಿದ್ದ ವೇಳೆ ಬಲೆಯೊಳಗೆ ಸಿಲುಕಿ ಮೀನುಗಾರನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ.

ಪೊಲಿಪು ನಿವಾಸಿ ಕಿಶೋರ್ (29 ) ಮೃತ ದುರ್ದೈವಿ. ಪ್ರತಿದಿನ ಕಯಾಕ್ ಮೂಲಕ ಮೀನುಗಾರಿಕೆಗೆ ತೆರಳುತ್ತಿದ್ದ ಕಿಶೋರ್, ಇಂದು ಮುಂಜಾನೆಯು ಕಾಯಾಕ್ ಮೂಲಕ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Post