ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಲಿಂಗಾಯತ ಹಾಗೂ ಒಕ್ಕಲಿಗರ ಕಿವಿ ಮೇಲೆ ಬಿಜೆಪಿ ಸರ್ಕಾರ ಹೂ ಇಟ್ಟಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.
ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ವರದಿ ಸಲ್ಲಿಕೆಗೆ ಇನ್ನಷ್ಟು ಕಾಲಾವಕಾಶ ಬೇಕು ಎಂಬ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆಯ ವರದಿಯೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂವಿನ ವ್ಯಾಪಾರಿ ಇದ್ದಂಗೆ, ಧಾರಾಳವಾಗಿ ಎಲ್ಲರ ಕಿವಿಗೂ ಹೂವಿಡುತ್ತಾರೆ ಎಂದು ಕಿಡಿಕಾರಿದೆ.
2ಎ ಮೀಸಲಾತಿ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ವರದಿ ನೀಡಲು ಸದ್ಯಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ. ಈ ಸಮುದಾಯಗಳಿಗೆ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದೆ.