ಆನಂದಪುರ: ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ಮುಂಬಾಳ್ ಕೆರೆ ಬಳಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯಾದ ರಭಸಕ್ಕೆ ಕಾರು ಕೆರೆಯ ತಡೆ ಗೋಡೆಯ ಮೇಲೆ ನಿಂತಿದೆ. ಕಾರಿನಲ್ಲಿದ್ದ ಭರತ್ ಹಾಗೂ ಶರತ್ ಇಬ್ಬರೂ ಪ್ರಯಾಣಿಸುತ್ತಿದ್ದು ಇಬ್ಬರಿಗೂ ಗಾಯವಾಗಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳಿಸಲಾಯಿತು.
ಖಾಸಗಿ ಬಸ್ಸಿನಲ್ಲಿ 30 ಜನರು ಪ್ರಯಾಣಿಕರಿದ್ದರು, ಓರ್ವ ಮಹಿಳೆಗೆ ಸಣ್ಣ ಪುಟ್ಟ ಗಾಯವಾಗಿದೆ. ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
