ಹರಿಯಾಣ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ.
ಹರಿಯಾಣದಲ್ಲಿನ ಭೂ ವ್ಯವಹಾರ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಾದ್ರಾ ಸೇರಿ ಇತರ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಹರಿಯಾಣದಲ್ಲಿ 2008ರಲ್ಲಿ ನಡೆದ ಭೂ ಒಪ್ಪಂದದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ವಾದ್ರಾ ಅವರನ್ನು ಏಪ್ರಿಲ್‌ನಲ್ಲಿ ಸತತ ಮೂರು ದಿನ ವಿಚಾರಣೆಗೆ ಒಳಪಡಿಸಿತ್ತು.
