Trending

ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ : ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ‘FIR’ ದಾಖಲು

Spread the love

ಬೀದರ್ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ. ಯುವತಿಯ ದೂರಿನ ಅನ್ವಯ FIR ದಾಖಲು ಮಾಡಲಾಗಿದೆ. ಸೆಕ್ಷನ್ 376 (2) (N) 366, 324, 506 ಅಡಿ ಕೇಸ್ ದಾಖಲಾಗಿದೆ.

ಸಂಧ್ಯಾ ಎಂಬ ಯುವತಿಯಿಂದ ದೂರು ದಾಖಲಾಗಿದ್ದು ಮದುವೆಯಾಗುವುದಾಗಿ ನಂಬಿಸಿ ವಂಚನೆ ಎಸಗಿರುವ ಆರೋಪ ಕೇಳಿ ಬಂದಿದೆ. ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಯುವತಿಯ ಮೇಲೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಂದು ಯುವತಿ ಆರೋಪಿಸಿದ್ದಾಳೆ.

ಈ ಹಿನ್ನೆಲೆ ಇಂದು ಬೆಳಿಗ್ಗೆ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದಳು. ಬಳಿಕ ಬೀದರ್ ಎಸ್ ಪಿ ಪ್ರದೀಪ್ ಅವರನ್ನು ಭೇಟಿಯಾಗಿ ಅವರಿಗೆ ಸಹ ದೂರು ನೀಡಿದ್ದಾಳೆ. ಇದೀಗ ಪ್ರತಿಕ್ ಚೌಹಾಣ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

 

[pj-news-ticker]