Trending

ಹೊಸನಗರ : ಸರ್ಕಾರಿ ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

Spread the love

ಹೊಸನಗರ : ಹೊಸನಗರದ ಸರ್ಕಾರಿ ಶಾಲೆಯ ನೀರಿನ‌ ಟ್ಯಾಂಕ್​ಗೆ ಕೀಟನಾಶಕ ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿ, “ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ ಈ ಬಗ್ಗೆ ಎಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಪೋಸ್ಟ್​ ಹಾಕಿದ್ದಾರೆ.

[pj-news-ticker]