Breaking
Sat. Apr 20th, 2024

ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕ ಮೃತ್ಯು

By Mooka Nayaka News Mar 4, 2024
Spread the love

ಹಾವೇರಿ: ರಾಜ್ಯಮಟ್ಟದ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ಯುವಕನೊಬ್ಬ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಹಿರೇಕೆರೂರ ತಾಲೂಕಿನ ಹಂಸಭಾವಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೃತ ಯುವಕ ಅರಳಿಕಟ್ಟಿ ಗ್ರಾಮದ ಮಂಜಪ್ಪ ಚನ್ನಪ್ಪನವರ (38) ಎನ್ನುವವರಾಗಿದ್ದು, ಹೋರಿ ತಿವಿದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಪೋಲಿಸರು ಸಾವಿರಾರು ಜನರು ಭಾಗಿಯಾಗಿದ್ದ ಹೋರಿ ಬೆದರಿಸುವ ಹಬ್ಬವನ್ನು ನಿಲ್ಲಿಸಿ ಕ್ರಮ ಕೈಗೊಂಡಿದ್ದಾರೆ. ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Post