Trending

ರಾಜ್ಯಾಧ್ಯಕ್ಷ ಆಸೆ ವ್ಯಕ್ತಪಡಿಸಿದ ಶ್ರೀರಾಮುಲು

Spread the love

ದಾವಣಗೆರೆ: ಪಕ್ಷ ಅವಕಾಶ ನೀಡಿದರೆ ನಮ್ಮೆಲ್ಲಾ ನಾಯಕರನ್ನೂ ಒಗ್ಗೂಡಿಸುವೆ ಎನ್ನುವ ಮೂಲಕ ಮಾಜಿ ಸಚಿವ ಶ್ರೀರಾಮುಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತೀಯ ಎಲ್ಲರನ್ನೂ ಒಂದು ಮಾಡುತ್ತೇನೆ. ಆದಷ್ಟು ಬೇಗನೆ ರಾಷ್ಟ್ರೀಯ ಅಧ್ಯಕ್ಷರ ನೇಮಕದ ಬಳಿಕ ರಾಜ್ಯಾಧ್ಯಕ್ಷರ ನೇಮಕ ನಡೆಯಲಿದೆ ಎಂದರು.

ರೆಡ್ಡಿ-ರಾಮುಲುಗೆ ಒಂದು ಮಾಡಿ ನನಗೆ ಒಳ್ಳೆಯ ಗಿಫ್ಟ್ ಕೊಟ್ಟರು ಎಂಬ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಮುಲು ಮತ್ತು ಜನಾರ್ದನ ರೆಡ್ಡಿ ಒಂದಾಗಲು ಎಲ್ಲ ನಾಯಕರ ಸಹಕಾರವೂ ಇದೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜೊತೆಗೆ ಬಿ.ಎಸ್.ಯಡಿಯೂರಪ್ಪನವರ ಸಹಕಾರವೂ ಇದೆ ಎಂದರು.

ರಮೇಶ ಜಾರಕಿಹೊಳಿ-ವಿಜಯೇಂದ್ರರನ್ನೂ ಒಂದು ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ಬಿಜೆಪಿ ವರಿಷ್ಠರು ನನಗೆ ಅವಕಾಶ ನೀಡಿದರೆ ಎಲ್ಲರನ್ನೂ ಒಗ್ಗೂಡಿಸುವೆ. ರಾಜ್ಯದ 224 ಕ್ಷೇತ್ರಗಳಲ್ಲೂ ನಮ್ಮೆಲ್ಲಾ ನಾಯಕರನ್ನೂ ಒಗ್ಗೂಡಿಸುವೆ ಎನ್ನುವ ಮೂಲಕ ಪರೋಕ್ಷವಾಗಿ ರಾಜ್ಯಾಧ್ಯಕ್ಷರಾಗುವ ಆಸೆ ವ್ಯಕ್ತಪಡಿಸಿದರು.

[pj-news-ticker]