ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ.
ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಅವರ ಅವಧಿಯು ಏಪ್ರಿಲ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಡ್ಡಾ ಅವರು ಗುಜರಾತ್‌ನಿಂದ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಅವರು ಹಿಮಾಚಲ ಪ್ರದೇಶದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಂಗೀಕರಿಸಿದ್ದಾರೆ.
ಈ ಮಧ್ಯೆ, 2020 ರಿಂದ ಬಿಜೆಪಿ ಅಧ್ಯಕ್ಷರಾಗಿರುವ ಜೆಪಿ ನಡ್ಡಾ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ ಗುಜರಾಜ್ ಬಿಜೆಪಿ, ಗುಜರಾತ್‌ನ ರಾಜ್ಯಸಭಾ ಸಂಸದ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.