Spread the love

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವವರಿಗೆ ಉಚಿತ ಪ್ರಯಾಣದ ಅವಕಾಶ ನೀಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದೀಗ ಎಸ್​​ಎಸ್​ಎಲ್​ಸಿ ಪರೀಕ್ಷೆ  ಬರೆಯಲು ತೆರಳುವ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ಘೋಷಿಸಿದೆ.

ಮಾರ್ಚ್ 31ರಿಂದ ರಾಜ್ಯದಲ್ಲಿ ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 15ರ ವರೆಗೆ ನಡೆಯಲಿದೆ. ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸಬಹುದು. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಈ ಸೇವೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ನಿಗಮ ತಿಳಿಸಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್​ ನಿಲುಗಡೆ ನೀಡುವಂತೆ ಮತ್ತು ಕೋರಿಕೆಯ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.

ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಉಚಿತವಾಗಿ ಕೆಎಸ್​ಆರ್​ಟಿಸಿ ಬಸ್​​ಗಳಲ್ಲಿ ತೆರಳುತ್ತಿದ್ದಾರೆ. ಮಾರ್ಚ್ 29ರ ವರೆಗೆ ಪಿಯುಸಿ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದಾಗಿದೆ.

Leave a Reply

Your email address will not be published. Required fields are marked *