Trending

ಸಚಿವ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕೆ.ಎನ್‌.ರಾಜಣ್ಣ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೀಗ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ರಾಜಣ್ಣ ಅವರ ರಾಜೀನಾಮೆ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಸದನದಲ್ಲಿ ಸೋಮವಾರ ಕೂಡ ವಿಪಕ್ಷಗಳು ನಾಯಕರು ಆಗ್ರಹಿಸಿದ್ದಾರೆ. ಈ ನಡುವೆ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆ.ಎನ್‌. ರಾಜಣ್ಣ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಿಎಂ ರವಾನಿಸಿದ್ದರು. ಹೀಗಾಗಿ ಇದನ್ನು ಗವರ್ನರ್‌ ಅಂಗೀಕರಿಸಿದ್ದಾರೆ.

ಬಿಜೆಪಿ ಮತಗಳ್ಳತನ ಕುರಿತಂತೆ ಅವರು ನೀಡಿದ್ದ ಹೇಳಿಕೆಗೆ ಕಾಂಗ್ರೆಸ್‌ ಹೈಕಮಾಂಡ್‌ ತೀವ್ರವಾಗಿ ಗರಂ ಆಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

[pj-news-ticker]