ಕಲಬುರಗಿ : ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರು ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.
