Breaking
Sat. Apr 20th, 2024

ಕುವೆಂಪು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ.ಶರತ್ ಅನಂತಮೂರ್ತಿ ನೇಮಕ

By Mooka Nayaka News Mar 6, 2024
Spread the love

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೀತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು‌ ‌ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಅವರ ಮಗನಾದ ಶರತ್ ಅನಂತಮೂರ್ತಿ ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಯಾಗಿ ಮುಂದುವರೆಯಲಿದ್ದಾರೆ.

Related Post