Trending

ರಾಮೇಶ್ವರ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ!

Spread the love

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಬಾಂಬರ್ ನ ಸಿಸಿಟಿವಿ ಪೋಟೋವನ್ನು ಎನ್ ಐಎ ಬಿಡುಗಡೆ ಮಾಡಿತ್ತು. ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬುವವರು ಬಾಂಬರ್’ನ ರೇಖಾ ಚಿತ್ರವನ್ನು ಬಿಡಿಸಿದ್ದು, ಈ ರೇಖಾಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿರುವ ಫೋಟೋವನ್ನು ಅಧಾರಿತವಾಗಿ‌ಟ್ಟು ಹರ್ಷಾ ಅವರು ಇಮ್ಯಾಜನರಿ ಸ್ಕೆಚ್ ಬಿಡಿಸಿದ್ದಾರೆ. ಸಂಪೂರ್ಣ ಮುಖದ ರೇಖಾ ಚಿತ್ರ ಬಿಡಿಸಿರುವ ಅವರು, ನಾಲ್ಕು ಆ್ಯಂಗಲ್ ನ ರೇಖಾಚಿತ್ರ ಬಿಡುಗಡೆ ಮಾಡಿದ್ದಾರೆ.

ಈ ರೇಖಾ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ‌ ಪೋಸ್ಟ್ ಮಾಡಿದ್ದು, ಎನ್ಐಎ ಮತ್ತು ನಗರ ‌ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಶಂಕಿತ ಉಗ್ರನ ಸುಳಿವು ಸಿಕ್ಕರೆ 080-29510900, 8904241100 ಸಂಖ್ಯೆಗೆ ಕರೆ ಮಾಡುವಂತೆ ಎನ್ಐಎ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. Info.blr.nia@gov.in ಗೂ ಮೇಲ್ ಮಾಡಿ ಶಂಕಿತನ ಮಾಹಿತಿಯನ್ನು ಅಧಿಕಾರಿಗಳ ಜೊತೆ ಹಂಚಿಕೊಳ್ಳಬಹುದಾಗಿದೆ.

[pj-news-ticker]