Spread the love

ಹಾಸನ: ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆದಿ ಚುಂಚನಗಿರಿ ಆಸ್ಪತ್ರೆಯಲ್ಲಿ ಜಿನೈಕ್ಯರಾಗಿದ್ದಾರೆ. 73 ವರ್ಷದ ಸ್ವಾಮೀಜಿಯವರು ಕೆಲಕಾಲದಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು.ಅರೋಗ್ಯ ತೀವ್ರ ಹದಗೆಟ್ಟ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಾಚೀನ ಧರ್ಮಪೀಠದ ಪೀಠಾಧಿಪತಿಗಳಾದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಅಪಾರ ಭಕ್ತರು ಆಗಮಿಸಲಿದ್ದು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಐದು ದಶಕಗಳ ಕಾಲ ಸಮಾಜಕ್ಕೆ ಹಲ ವಾರು ಕೊಡುಗೆಗಳನ್ನು ನೀಡಿದ್ದ ಚಾರು ಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಅಹಿಂಸೆ, ತ್ಯಾಗ ಹಾಗೂ ಶಾಂತಿಯಿಂದ ಜೈನ ಪರಂಪರೆಯನ್ನು ಬೆಳಗಿದ್ದರು.

73 ಸಂವತ್ಸರಗನ್ನು ಪೂರೈಸಿದ್ದ ಸ್ವಾಮೀಜಿಯವರ ಪೂರ್ವಾಶ್ರಮದ ಹೆಸರು ರತ್ತನವರ್ಮ. 1949 ಮೇ 3 ರಂದು ದಕ್ಷಿಣ ಕನ್ನಡ ಜಿಲ್ಲೆ ವರಂಗ ಗ್ರಾಮದ ಉಪಾಧ್ಯಾಯ ಮನೆತನದಲ್ಲಿ ಜನಿಸಿದ್ದರು. 1969 ಡಿಸೆಂಬರ್ 12 ರಂದು ಸನ್ಯಾಸ ದೀಕ್ಷೆ ಪಡೆದಿದ್ದ ಅವರು 1970 ರ ಏಪ್ರಿಲ್ 19 ರಂದು ಶ್ರವಣಬೆಳಗೊಳ ಮಠದ ಪೀಠಾರೋಹಣ ಮಾಡಿದ್ದರು.

Leave a Reply

Your email address will not be published. Required fields are marked *