Breaking
Sat. Apr 20th, 2024

ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ ಐ ಆರ್ ದಾಖಲು

By Mooka Nayaka News Mar 8, 2024
Spread the love

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ದ ಎಫ್ ಐಆರ್ ದಾಖಲು ಮಾಡಲಾಗಿದೆ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿಎಫ್ ಐಆರ್ ದಾಖಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅರುಣಾ ಲಕ್ಷ್ಮೀ ಅವರು ಕೆ ಆರ್​ ಪಿ ಪಿ ಪಕ್ಷದಿಂದ ಬಳ್ಳಾರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಸೋಲುಂಡಿದ್ದರು. ಆದರೆ ವಿಧಾನಸಭಾ ಚುನಾವಣೆಯ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಶ್ರೀನಿವಾಸ್ ರಂಗರೆಡ್ಡಿ ನೀಡಿದ ದೂರಿನ ಮೇರೆಗೆ ಎಫ್ ಐ ಆರ್ ಮಾಡಲಾಗಿದೆ.

ಜನವರಿ 8ರಂದು ಬಳ್ಳಾರಿಯ ಗಾಂಧಿ ನಗರ ಠಾಣೆಯಲ್ಲಿ ರಂಗರೆಡ್ಡಿ ಎಂಬವರು ದೂರು ದಾಖಲು ಮಾಡಿದ್ದು, ಆ ಬಳಿಕ ತನಿಖೆಗೆ ಅನುಮತಿ ನೀಡುವಂತೆ ಪೊಲೀಸರು ಜಿಲ್ಲಾ ಮ್ಯಾಜಿಸ್ಟ್ರೇಟ್​​ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಕೂಡಲೇ ತನಿಖೆ ಆರಂಭಿಸುವಂತೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮಾರ್ಚ್​​07 ರಂದು ಪೊಲೀಸರು ಪ್ರಜಾ ಪ್ರತಿನಿಧಿ ಕಾಯ್ದೆ-1951, 1988 ಸೆಕ್ಷನ್ 125 (a) ಅನ್ವಯ ಎಫ್​ಐಆರ್ ದಾಖಲು ಮಾಡಿದ್ದಾರೆ.

Related Post