ಶಿವಮೊಗ್ಗ: ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದೂಗಳ ನಡುವೆ ಗಲಾಟೆಯಾಗಿದ್ದು, ಇದನ್ನು ಹಿಂದೂ ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಬಿಜೆಪಿ ಕಾರ್ಯಕರ್ತರ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತ ಶಂಕರ್ ಎನ್ನುವಾತನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂದು ಪೊಲೀಸರು ದೂರು ನೀಡಿದ್ದಾರೆ.
ನಿನ್ನೆ (ಆಗಸ್ಟ್ 31) ಆಶ್ರಯ ಬಡಾವಣೆಯಲ್ಲಿ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಆದ್ರೆ, ಇದನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಶಂಕರ್ ಎನ್ನುವರು ಹಿಂದೂ ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಬಡವಾವಣೆ ಸ್ಥಳೀಯರು, ಬಿಜೆಪಿ ಕಾರ್ಯಕರ್ತ ಶಂಕರ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ತುಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿಗಳ ಸಂಘದ ಅಧ್ಯಕ್ಷ ಶಂಕರ ಎನ್ನುವಾತ ಅನ್ಯೋನ್ಯವಾಗಿರುವ ಹಿಂದೂ ಮತ್ತು ಮುಸ್ಲೀಂ ನಡುವೆ ಜಗಳ ಹಚ್ಚುವ ಷಡ್ಯಂತ್ರ ಮಾಡಿದ್ದಾರೆ ಎಂದು ಸ್ಥಳೀಯ ಬಡಾವಣೆ ಜನರ ಆಕ್ರೋಶ ಹೊರಹಾಕಿದ್ದು, ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕೆಂದು ಆಗ್ರಹಿಸಿದ್ದಾರೆ.
