ಮೈಸೂರು: ಮಾಜಿ ಶಾಸಕ ವಾಸು (72) ಅವರು ಮಾ.9ರ ಶನಿವಾರ ನಿಧನರಾಗಿದ್ದಾರೆ.ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ವಾಸು ಅವರು ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಮ್ಮೆ ಶಾಸಕರಾಗಿದ್ದರು.
ಮೈಸೂರಿನ ಜಯಲಕ್ಷ್ಮಿಪುರಂ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಮಾಜಿ ಶಾಸಕ ವಾಸು ಅವರು ಜೆಎಸ್‌ಎಸ್ ಆಸ್ಪತ್ರೆಗೆ 15 ವರ್ಷದ ಹಿಂದೆಯೇ ದೇಹದಾನ ಮಾಡಿದ್ದಾರೆ. ಮಾಜಿ ಶಾಸಕ ವಾಸು ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಿದ್ದಾರೆ.
ಸಾರ್ವಜನಿಕರ ಅಂತಿಮ ದರ್ಶನ ಬಳಿಕ ಜೆಎಸ್ಎಸ್ ಮೆಡಿಕಲ್ ಕಾಲೇಜಿಗೆ ದೇಹ ಹಸ್ತಾಂತರ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.