Trending

ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್, ನಾಲ್ವರು ಸಾವು

Spread the love

ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್‌ ಹರಿದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.

ಇನ್ನು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಸನ ತಾಲೂಕಿನ ಮೊಸಳೆಹೊಸಳ್ಳಿ  ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದೆ.

ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ಗುದ್ದಿ ಯಮನಂತೆ ಬಂದ ಟ್ರಕ್,  ನೇರವಾಗಿ ಸಾವಿರಾರು ಜನರಿದ್ದ ಮೆರವಣಿಗೆಗೆ ನುಗ್ಗಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನು ಗಾಯಾಳುಗಳನ್ನು ವಿವಿಧ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮಾಜಿ ಸಚಿವ ಎಚ್ಡಿ ರೇವಣ್ಣ, ಪರಿಷತ್ ಸದಸ್ಯ ಸೂರಜ್ ರೇವಣ್ಣ, ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿದ್ದು, ಈ ವೇಳೆ ಪೊಲೀಸ್ ವೈಫಲ್ಯದಿಂದ ಅವಘಡ ಸಂಭವಿಸಿದೆ ಎಂದು ರೇವಣ್ಣ ಕಿಡಿಕಾರಿದರು.  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹ ದುರಂತ ನಡೆದ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ.

[pj-news-ticker]