Trending

ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌ : 3 ಲಕ್ಷ ದೋಚಿದ ಸೈಬರ್‌ ಖದೀಮರು!

Spread the love

ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್‌ ಖಾತೆ ಹ್ಯಾಕ್ ಆಗಿದ್ದು, ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಆಯೋಜಿಸಿದ್ದ75 ಪೌರ ಕಾರ್ಮಿಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ.

ನೆನ್ನೆ ನನ್ನ 3 ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 ಲಕ್ಷ ರೂ. ಹಣ ಹೋಗಿದೆ. ಎಚ್‌ಡಿಎಫ್‌ಸಿ, ಎಸ್‌ಬಿಐ ಹಾಗೂ ಆಕ್ಸಿಸ್ ಬ್ಯಾಂಕಿನ ಖಾತೆಯಲ್ಲಿದ್ದ ಹಣ ಕಳ್ಳತನವಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿ ಹಣ ಕಳ್ಳತನ ಮಾಡಿದ್ದು ಸೈಬರ್ ಕ್ರೈಮ್‌ಗೆ ದೂರು ನೀಡುತ್ತೇನೆ ಎಂದು ಹೇಳಿದರು.

[pj-news-ticker]