Trending

ಆಗುಂಬೆ ಘಾಟಿ : ಭಾರೀ ಪ್ರಮಾಣದಲ್ಲಿ ಧರೆ ಕುಸಿತ – ವಾಹನ ಸಂಚಾರ ಸ್ಥಗಿತ

Spread the love

ತೀರ್ಥಹಳ್ಳಿ : ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಶುಕ್ರವಾರ ಸಂಜೆ ಭಾರೀ ಪ್ರಮಾಣದಲ್ಲಿ ಧರೆ ಕುಸಿದಿದ್ದು, ವಾಹನದ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತವಾಗಿದೆ.

ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಭೂ ಕುಸಿತ ಕಂಡಿದ್ದು ರಸ್ತೆ ಮೇಲೆ ಧರೆಯ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಗೂಡ್ಸ್ ವಾಹನ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪಾರಾಗಿದ್ದಾರೆ.

ಮಣ್ಣು ತೆರವು ಕಾರ್ಯಾಚರಣೆ ತಡವಾಗುವ ಕಾರಣದಿಂದ ಶನಿವಾರ ಬೆಳಗ್ಗೆವರೆಗೂ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಶಿವಮೊಗ್ಗ ದಿಂದ ಉಡುಪಿ ತೆರಳುವವರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.

[pj-news-ticker]