ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಶಿವಮೊಗ್ಗ ತೀರ್ಥಹಳ್ಳಿ ಮಾರ್ಗದ ಪಟ್ಟಣದ ಕುಶಾವತಿಯಿಂದ ಬದನೇಹಿತ್ಲು ಬಳಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಎರಡು ವಾಹನಗಳು ಉಜ್ಜಿಕೊಂಡು ಅದನ್ನು ತಪ್ಪಿಸಲು ಹೋದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ.
ಪಟ್ಟಣದ ಕುಶಾವತಿ ಸಮೀಪ ಈ ಘಟನೆ ನಡೆದಿದ್ದು ರಸ್ತೆಯಲ್ಲಿ ಹೊಂಡ ಗುಂಡಿಗಳು ಅತಿ ಹೆಚ್ಚಾಗಿದ್ದು ಇದನ್ನು ತಪ್ಪಿಸಲು ಹೋದ ವಾಹನ ಸವಾರರು ದಿನಂಪ್ರತಿ ಬೀಳುವಂತಾಗಿದೆ. ಅಷ್ಟೇ ಅಲ್ಲದೆ ವಾಹನಗಳು ಅಪಘಾತಕ್ಕಿಡಾಗುತ್ತಿವೆ. ರಸ್ತೆಯಲ್ಲಿ ಹಲವಾರು ಹೊಂಡ ಗುಂಡಿಗಳಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.
ಸಂಬಂಧಪಟ್ಟಂತಹ ಅಧಿಕಾರಿಗಳು ಕೂಡಲೇ ರಸ್ತೆಯ ಮಧ್ಯೆ ಇರುವ ಹೊಂಡ ಗುಂಡಿಗಳನ್ನು ಮುಚ್ಚಿಸಬೇಕೆಂದು ಸ್ಥಳೀಯರು, ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.
