Trending

ಶಿಕಾರಿಪುರ: ಬಗನಕಟ್ಟೆ ಸರ್ಕಾರಿ ಶಾಲಾ ಆವರಣದಲ್ಲಿ ಹೆಜ್ಜೇನು ದಾಳಿ ಗಾಯಗೊಂಡ ವಿದ್ಯಾರ್ಥಿಗಳು

Spread the love

ಶಿಕಾರಿಪುರ: ತಾಲೂಕಿನ ಬಗನಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಶುಕ್ರವಾರ ಬೆಳಿಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ವಿದ್ಯಾರ್ಥಿಗಳ ದಾಳಿ ನಡೆಸಿವೆ. ಹೆಜ್ಜೇನು ದಾಳಿಯಿಂದ 13 ವಿದ್ಯಾರ್ಥಿಗಳಿಗೆ ಹಾಗೂ ಒಬ್ಬ ಮಹಿಳಾ ಸಿಬ್ಬಂದಿಗೆ ಗಾಯಗಳಾಗಿವೆ. ಹೆಜ್ಜೇನು ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ಗ್ರಾಮಸ್ಥ ಸುರೇಶ್ ಸೇರಿದಂತೆ ಹಲವು ಗ್ರಾಮಸ್ಥರು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದು ಚಿಕಿತ್ಸೆ ಕೊಡಿಸಿದರು.

ಗಾಯಗೊಂಡ 13 ವಿದ್ಯಾರ್ಥಿಗಳಲ್ಲಿ ತೀವ್ರವಾಗಿ ಗಾಯಗೊಂಡ 6 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು.

[pj-news-ticker]