Trending

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ : ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಕೈ ಕಾರ್ಯಕರ್ತರು

Spread the love

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಡಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಆರ್ ಎಸ್ ಎಸ್  ಸೇರಿದಂತೆ ಇತರೆ ಸಂಘ, ಸಂಸ್ಥೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಬ್ರೇಕ್ ಹಾಕಿದೆ. ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.

ಇದರ ನಡುವೆ ಆರ್ ಎಸ್ ಎಸ್ ಕಾರ್ಯಕರ್ತರೊಬ್ಬರನ್ನ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಗೆ ಸದಸ್ಯರನ್ನಾಗಿ ನೇಮಕ ಮಾಡಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ತಿಪಟೂರಿನ RSS ಸದಸ್ಯ ಡಾ.ಶ್ರೀಧರ್ ಕುಮಾರ್‌ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಕೆಎನ್ ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದೆ. ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಟ್ರಸ್ಟ್ನ ಮಹಾಪೋಷಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.

ಕರ್ನಾಟಕದ ಕೆಲವು ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನದಲ್ಲಿ ಭಾಗವಹಿಸಿರುವ ವಿಷಯವು ರಾಜ್ಯ ಸರ್ಕಾರದ ಸಂಪುಟದಲ್ಲಿ ಬಿರುಸಿನ ಚರ್ಚೆಗೆ ಕಾರಣವಾಗಿದ್ದು, ಇದೀಗ ಆರ್ಎಸ್ಎಸ್ ಹೆಸರು ಉಲ್ಲೇಖಿಸದೇ ನಿಯಮ ಜಾರಿ ಮಾಡಿದೆ.

ಇದರ ಬೆನ್ನಲ್ಲೇ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಸರ್ಕಾರಿ ಹಾಗೂ ಗುತ್ತಿಗೆ ನೌಕರರನ್ನು ಸಸ್ಪೆಂಡ್ ಮಾಡಲಾಗಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ನಡುವಿನ ಕಿತ್ತಾಟ ತಾರಕಕ್ಕೇರಿದೆ. ಈ ಎಲ್ಲಾ ಬೆಳವಣಿಗಳ ನಡುವೆ ಸರ್ಕಾರದ ಈ ನೇಮಕ ರಾಜ್ಯದ ರಾಜಕೀಯದಲ್ಲಿ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದೆ.

[pj-news-ticker]