Trending

SSLC ಪಾಸಿಂಗ್ ಮಾರ್ಕ್ 33 ಬೇಡ, 35 ಅಂಕ ಇರಲಿ : ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

Spread the love

ಬೆಂಗಳೂರು: ನಾನು ಶಿಕ್ಷಣ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆ ಕಾಲಾವಧಿಯಲ್ಲಿ ಅಗತ್ಯವಿರುವ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರನ್ನು ನೇಮಕ ಮಾಡಿದ್ದೇನೆ. ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡು ಉತ್ತೀರ್ಣ ಮಾಡುತ್ತೇವೆ ಎಂಬುದನ್ನು ಕೈಬಿಟ್ಟು, ಮುಂಚೆ ಇದ್ದ ಪದ್ಧತಿಯನ್ನೇ ಮುಂದುವರೆಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ, ಸಭಾಪತಿ ಬಸವರಾಜ ಹೊರಟ್ಟಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಈ ಸಂಬಂಧ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವಂತ ಅವರು, ಇತ್ತೀಚೆಗೆ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡರೆ ಅವರನ್ನು ಉತ್ತೀರ್ಣ ಗೊಳಿಸುತ್ತೇವೆ ಎಂದು ಹೇಳಿಕೆ ನೀಡಿರುತ್ತೀರಿ. ಇದು ಬಹಳ ಖೇದಕರ ಸಂಗತಿಯಾಗಿದೆ ಎಂದಿದ್ದಾರೆ.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಲಿಖಿತ ಪರೀಕ್ಷೆ ಎದುರಿಸುವುದು ಒಂದು ಅವಿಸ್ಮರಣೀಯ ಹಾಗೂ ವಿಶೇಷ ಘಟ್ಟವಾಗಿರುತ್ತದೆ ಮತ್ತು ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಎದುರಿಸುವುದು ಅನೇಕ ಅನುಭವಗಳನ್ನು ಸಹ ನೀಡುತ್ತದೆ ಅದರಲ್ಲೂ ಅಂಕಗಳನ್ನು ಗಳಿಸುವುದು ಒಂದು ಮುಖ್ಯ ಉದ್ದೇಶವಾಗಿದ್ದರೂ ಸಹ ಉಳಿದಂತೆ

ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ, ಧೈರ್ಯ, ಜ್ಞಾಪಕ ಶಕ್ತಿ, ಕಲಿಕೆಯ ನೈಪುಣ್ಯತೆ, ವಿಷಯಗಳ ಮನನ ಮಾಡುವುದು ಸೇರಿದಂತೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವಂತಹ ಅನೇಕ ವ್ಯಕ್ತಿತ್ವ ವಿಕಸನದಂತಹ ವಿದ್ಯಾರ್ಥಿ ಪರವಾಗಿರುವ ಸೂಕ್ಷ್ಮ ಅಂಶಗಳ ಸಮೀಕರಣ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಗಳನ್ನು ಹೊರತರಲು ಮುಂದಿನ ಜೀವನದ ಸರ್ವತೋಮುಖ ಬೆಳಗಣಿಗೆಗೆ ಪ್ರೇರಣೆ ಹೊಂದಿದ್ದು ಅವರುಗಳು ಪೂರಕವಾಗಿರುತ್ತದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಈ ರೀತಿಯ ಅನುಭವ ಮತ್ತು ಅನುಕೂಲತೆ ನೀಡುವಂತ ಪರೀಕ್ಷೆಗಳು ಮತ್ತು ಅಂತಹ ಪರೀಕ್ಷೆಗಳನ್ನು ಉತ್ತೀರ್ಣ ಹೊಂದಲು ಈ ಹಿಂದಿನಿಂದ ನಿಗಧಿ ಪಡಿಸಿರುವಂತೆ ಶೇಕಡಾ 35 ಅಂಕಗಳು ಸಮಂಜಸವಾಗಿದ್ದು, ದೀರ್ಘಕಾಲದಿಂದ ಸಾಭೀತಾದ ಮಾನದಂಡವಾಗಿರುತ್ತದೆ. ಇಂತಹ 33 ಅಂಕಗಳಿಗೆ ಕಡಿತಗೊಳಿಸುವಂತಹ ನಿರ್ಧಾರವು ಯಾವ ಮಾನದಂಡವನ್ನು ಎಕಾಏಕಿ ಕೋನದಿಂದಲೂ ಸಹ ಸಮಂಜಸವಾದುದಲ್ಲ ಎಂಬುದಾಗಿ ವಿರೋಧ ವ್ಯಕ್ತ ಪಡಿಸಿದ್ದಾರೆ.

 

[pj-news-ticker]