ಮೆಲ್ಬರ್ನ್: ಇಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಎರಡನೇ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತ ನೀಡಿದ್ದ 126ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 13.2 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. ಆ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತ ನೀಡಿದ್ದ126 ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕರಾದ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ 51 ರನ್ಗಳ ಉತ್ತಮ ಆರಂಭ ನೀಡಿದರು. ಈ ಹಂತದಲ್ಲಿ 28 ರನ್ ಗಳಸಿದ್ದ ಟ್ರಾವಿಸ್ ಹೆಡ್ ಔಟ್ ಆದರು. ಆದರೆ ಮಿಚಲ್ ಮಾರ್ಷ್ ಸಿಡಿಸಿದ ಸ್ಫೋಟಕ 46 ರನ್ಗಳ ನೆರವಿನಿಂದ ಇನ್ನೂ 6.4 ಓವರ್ಗಳು ಬಾಕಿ ಇರುವಂತೆ 4 ವಿಕೆಟ್ ಗೆಲುವು ಸಾಧಿಸಿದೆ.
ಭಾರತದ ಪರ ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ಹಾಗೂ ಕುಲದೀಪ ಯಾದವ್ ತಲಾ 2 ವಿಕೆಟ್ ಪಡೆದುಕೊಂಡರು.
ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 68 ರನ್ಸ್ (8 ಬೌಂಡರಿ ಹಾಗೂ 2 ಸಿಕ್ಸರ್) ಹೊರತುಪಡಿಸಿ ಉಳಿದ ಯಾವುದೇ ಅಗ್ರ ಕ್ರಮಾಂಕದ ಬ್ಯಾಟರ್ ಕೂಡ ಎರಡಂಕಿ ಮೊತ್ತ ಕಲೆಹಾಕದೆ ವಿಫಲರಾದರು.
ಶುಭಮನ್ ಗಿಲ್ (5), ಸಂಜು ಸ್ಯಾಮ್ಸನ್ (2), ನಾಯಕ ಸೂರ್ಯಕುಮಾರ್ ಯಾದವ್ (1), ತಿಲಕ್ ವರ್ಮಾ (0), ಅಕ್ಸರ್ ಪಟೇಲ್ (7) ರನ್ಗಳಿಸಿ ಔಟ್ ಆದರು. ಕೇಳಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ಹರ್ಷಿತ್ ರಾಣಾ (35) ರನ್ ಕಲೆಹಾಕುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು.
ಆಸ್ಟ್ರೇಲಿಯಾ ಪರ ಜೋಶ್ ಹ್ಯಾಜಲ್ವುಡ್ 3 ವಿಕೆಟ್ ಪಡೆದು ಮಿಂಚಿದರು, ಕ್ಸೇವಿಯರ್ ಬಾರ್ಟ್ಲೆಟ್ ಮತ್ತು ನಾಥನ್ ಎಲ್ಲಿಸ್ ತಲಾ 2 ವಿಕೆಟ್ ಪಡೆದುಕೊಂಡರೆ, ಮಾರ್ಕಸ್ ಸ್ಟೋಯಿನಿಸ್ 1 ವಿಕೆಟ್ ಪಡೆದು ಮಿಂಚಿದರು.
