Trending

ಶಿವಮೊಗ್ಗ- ಹಳೇಯ ದ್ವೇಷ : ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ

Spread the love

ಶಿವಮೊಗ್ಗ: ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಸೋಮವಾರ ಬೆಳಕಿಗೆ ಬಂದಿದೆ.

ಹತ್ಯೆಯಾದ ಮಹಿಳೆ ಗಂಗಮ್ಮ (45) ಎಂದು ತಿಳಿದುಬಂದಿದೆ.

ಹಳೇಯ ದ್ವೇಷದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿ ನಾಗೇಶ್ ನಾಯ್ಕ್ ಮತ್ತು ಹರೀಶ್ ಎಂಬುವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

[pj-news-ticker]