ಚಿಕ್ಕಮಗಳೂರು: 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಗುರುವಾರ ನಡೆದಿದೆ.
ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೋರ್ವ ಕಲ್ಲು ಹೊಡೆದಿದ್ದಾನೆ ಈ ವೇಳೆ ಹೆಜ್ಜೇನುಗಳ ಹಿಂಡು ಊಟಕ್ಕೆಂದು ಹೊರಗಿದ್ದ 25 ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿವೆ ಪರಿಣಾಮ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.
ಉಳಿದ ವಿದ್ಯಾರ್ಥಿಗಳಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ
